ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018ರ ಶಾಶ್ವತ ಪಟ್ಟಿಗೆ ಸೇರಿಸಲು ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ಬಾಕಿ ಉಳಿದಿರುವ ನಿವೇಶನ ಹೊಂದಿಲ್ಲದವರು ಹಾಗೂ ವಸತಿ ರಹಿತರ ಅರ್ಹತೆ ಹೊಂದಿರುವವರ ಸಮೀಕ್ಷೆ ಕಾರ್ಯದಿಂದ ಬಿಟ್ಟು ಹೋಗಿರುವ ಅರ್ಜಿದಾರರ ಆನ್‌ಲೈನ್ ನೋಂದಣಿ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಹರು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 15ರ ಒಳಗೆ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿ ಸಬಹುದಾಗಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor