ಉಡುಪಿ, ಸೆ.1: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 29.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ದೂ.ಸಂ: 0820- 2574978, ಶಿಶು ಅಭಿವೃದ್ದಿ ಯೋಜನಾಧಿ ಕಾರಿಗಳ ಕಚೇರಿ ಬ್ರಹ್ಮಾವರ: 0820-2562244, ಕಾರ್ಕಳ: 0858-230992, ಕುಂದಾಪುರ: 08254- 230807 ಹಾಗೂ ಉಡುಪಿ: 0820-2524055ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor