ಮಹಿಳೆ ನಾಪತ್ತೆ
ಉಡುಪಿ, ಸೆ.1: ಬೈಂದೂರು ತಾಲೂಕು ಶಿರೂರು ಗ್ರಾಮದ ಬುಕಾರಿ ಕಾಲೋನಿ ಬಳಿ ಬಾಡಿಗೆ ಮನೆಯಲ್ಲಿ ವಾಸದ್ದ ಬೀಬಿ ರಿಹಾನ (33) ಎಂಬ ಮಹಿಳೆ ಕೆಲಸದ ನಿಮಿತ್ತ 2 ದಿನಗಳವರೆಗೆ ಹೊರಗೆ ಹೋಗುತ್ತೇನೆಂದು ಹೇಳಿ ಹೋದವರು ಇದುವರೆಗೂ ಮನೆಗೆ ವಾಪಸು ಬಾರದೆ ನಾಪತ್ತೆಯಾಗಿದ್ದಾರೆ.
5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ದಪ್ಪನೆಯ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, 9480805459, ಬೈಂದೂರು ವೃತ್ತ ನಿರೀಕ್ಷಕರ ಕಛೇರಿ ದೂ.ಸಂಖ್ಯೆ: 08254-251031, 9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 100 (0820) 2526444 ಅನ್ನು ಸಂಪರ್ಕಿಸಬಹುದು ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.