ಉಡುಪಿ, ಸೆ.3: ಜಗತ್ತಿನಲ್ಲಿ ಯಾವುದೇ ಕಲೆ ಜನರ ಮನಸ್ಸನ್ನು ಅರಳಿಸಿ ಸಂಸ್ಕಾರವಂತರನ್ನಾಗಿ ಮಾಡುತ್ತದೆ. ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜತೆಯಲ್ಲಿ ಯಕ್ಷಗಾನ ಕೋರ್ಸ್‌ನ್ನು ಸದುಪಯೋಗ ಪಡೆದು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಉಡುಪಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಡಾ.ಗಾಯತ್ರಿ ಪೈ ಹೇಳಿದ್ದಾರೆ.

ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ ಹಾಗೂ ಎಂ.ಜಿ.ಎಂ. ಕಾಲೇಜಿನ ಯಕ್ಷಗಾನ ಮತ್ತು ನಾಟಕ ರಂಗ ಮತ್ತು ಐಕ್ಯೂಎಸಿ ಸಂಯುಕ್ತವಾಗಿ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಿದ ಪ್ರಸಕ್ತ ಶೈಕ್ಷಣಿಕ ಸಾಲಿನ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್‌ನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ ಶೆಟ್ಟಿ, ಯಕ್ಷ ಗುರು ಕೃಷ್ಣಮೂರ್ತಿ ಭಟ್ ಬಗ್ವಾಡಿ, ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಪ್ರೊ.ಶೈಲಜಾ ಉಪಸ್ಥಿತರಿದ್ದರು. ಯಕ್ಷಗಾನ ಮತ್ತು ನಾಟಕ ರಂಗದ ಸಂಯೋಜಕ ರಾಘವೇಂದ್ರ ತುಂಗ ಕೆ. ಸ್ವಾಗತಿಸಿ ನಿರೂಪಿಸಿದರು. ಸಹಸಂಯೋಜಕ ಶ್ರೀಧರ ರಾವ್ ಸಹಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor