ಪಡುಬಿದ್ರಿ, ಸೆ.3: ಲಾರಿಯೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಂದಿಕೂರಿನಲ್ಲಿ ಬುಧವಾರ ರಾತ್ರಿ ನಡೆದಿದೆ.

ಮೃತರನ್ನು ಬೆಳಗಾವಿ ರಾಯದುರ್ಗ ಮೂಲದ ಸುರತ್ಕಲ್ ಕೋಡಿಕರೆ ನಿವಾಸಿ ಮಂಜುನಾಥ ಬೈಲಪ್ಪ ಮುರಗಾಲಿ (21) ಎಂದು ಗುರುತಿಸಲಾಗಿದೆ. ಕಾರ್ಕಳ -ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ರುವ ಬಸ್ ನಿಲ್ದಾಣದ ಬಳಿ ಯಾವುದೆ ಪಾರ್ಕಿಂಗ್ ಲೈಟ್ ಹಾಕದೆ ಹಾಗೂ ಮುಂಜಾಗ್ರತಾ ಕ್ರಮಗಳಿಲ್ಲದೆ ನಿಲ್ಲಿಸಿದ್ದ ಲಾರಿಯೊಂದರ ಹಿಂಬದಿಗೆ ಕಾರ್ಕಳ ಕಡೆಯಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆ ನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರ ಮಂಜು ನಾಥ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿ ರುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಕೊಂಡೊಯ್ಯುವಾಗಲೆ ಸಾವನ್ನಪ್ಪಿದ್ದಾರೆ. ಖಾಸಗಿ ಉದ್ಯೋಗಿಯಾಗಿರುವ ಇವರಿಗೆ, ವರ್ಷದ ಹಿಂದೆ ಮದುವೆ ನಿಶ್ಚಯ ವಾಗಿತ್ತೆಂದು ಪೊಲೀಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor