ಕಾಪು ವೃತ್ತ ಮಟ್ಟದ ಬಾಲಕ, ಬಾಲಕಿಯರ ಖೋಖೋ ಪಂದ್ಯಾಟ
ಶಿರ್ವ, ಸೆ.4: ಉಡುಪಿ ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪಡುಬೆಳ್ಳೆ ಶ್ರೀನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಕಾಪು ವೃತ್ತ ಮಟ್ಟದ 14 ಮತ್ತು 17ರ ವಯೋಮಾನದ ಶಾಲಾ ಬಾಲಕ, ಬಾಲಕಿಯರ ಖೋ ಖೋ ಪಂದ್ಯಾಟವನ್ನು ಪಡುಬೆಳ್ಳೆ ಶ್ರೀನಾರಾಯಣಗುರು ಶಾಲಾ ಕ್ರೀಡಾಂಗಣ ದಲ್ಲಿ ಗುರುವಾರ ಆಯೋಜಿಸಲಾಗಿತ್ತು.
ಪಂದ್ಯಾಟವನ್ನು ಉದ್ಘಾಟಿಸಿದ ಉಡುಪಿ ತಾಲೂಕು ಕೃಷಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಮೋಹನ್ ರಾಜ್ ಮಾತನಾಡಿ, ಭಾರತ ಸರಕಾರ, ರಾಜ್ಯ ಸರಕಾರಗಳು ಗ್ರಾಮೀಣ ಹಳ್ಳಿ ಪ್ರದೇಶದ ಕ್ರೀಡಾಪಟು ಗಳನ್ನು ಗುರುತಿಸಿ ಯೋಗ್ಯ ತರಬೇತಿ ನೀಡುವ ಯೋಜನೆಯನ್ನು ರೂಪಿಸಿದ್ದು, ಗ್ರಾಮೀಣ ಕ್ರೀಡೆಗಳು, ಪಂದ್ಯಾಟಗಳು ಉದಯೋನ್ಮೂಖ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಕಬಡ್ಡಿ, ಖೋಖೋ ರಾಷ್ಟ್ರೀಯ ಕ್ರೀಡಾ ಪಂದ್ಯಾಟಗಳಾಗಿದ್ದು ಈಗ ಹಳ್ಳಿಯ ಪ್ರತಿಭೆಗಳಿಗೂ ಉತ್ತಮ ಅವಕಾಶ ಬಂದಿದೆ ಎಂದು ಹೇಳಿದರು.
ಶಾಲಾ ಆಡಳಿತ ಮಂಡಳಿಯ ಸದಸ್ಯ ಶಿವಾಜಿ ಎಸ್.ಸುವರ್ಣ ಅಧ್ಯಕ್ಷತೆ ವಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಪ್ರಕಾಶ್ ಪಾಲಮೆ, ಗೀತಾ ವಾಗ್ಲೆ ಬಂಟ ಕಲ್ಲು, ಸುರೇಶ್ ಪೂಜಾರಿ, ಕನ್ನಡ ಮಾಧ್ಯಮದ ಹಳೆ ವಿದ್ಯಾರ್ಥಿ ಉದ್ಯಮಿ ಸಂತೋಷ್ ಪೂಜಾರಿ, ಹಳೆದ್ಯಾರ್ಥಿ ಸಂಘದ ಅಧ್ಯಕ್ಷ ಚರಣ್ ದೇವಾಡಿಗ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿತ್ಯಾನಂದ ಆಚಾರ್ಯ ವೇದಿಕೆಯಲ್ಲಿದ್ದರು.
ಉಡುಪಿ ವಲಯ ದೈಕ ಶಿಕ್ಷಣ ಪರೀಕ್ಷಣಾಧಿಕಾರಿ ರವೀಂದ್ರ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕ ರಾಘವೇಂದ್ರ ಸಾಲಿಯಾನ್ ಸ್ವಾಗತಿಸಿದರು. ಕನ್ನಡ ಮಾಧ್ಯಮ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಪಾಂಡುರಂಗ ಮಲ್ಯ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ದೇವಾಡಿಗ ಕಾರ್ಯಕ್ರಮ ಸಂಯೋಜಿಸಿದ್ದರು. ಶಿಕ್ಷಕಿಯರಾದ ವೀಣಾ ನಾಯಕ್, ರಿನುಷಾ ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾಟದಲ್ಲಿ ಒಟ್ಟು 36 ತಂಡಗಳು ಪಾಲ್ಗೊಂಡಿದ್ದವು.