ಕುಂದಾಪುರ, ಸೆ.4: ಅನಿವಾಸಿ ಕನ್ನಡಿಗರ ಒತ್ತಾಸೆಯಂತೆ, ಅವರ ಹಿತದೃಷ್ಟಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿ ಸುವ ಕುರಿತು ರಾಜ್ಯಸರಕಾರ ವಿಧಾನಸಭೆಯಲ್ಲಿ ಭರವಸೆ ನೀಡಿದ್ದು, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸರಕಾರದೊಂದಿಗೆ ಚರ್ಚಿಸಿ ಅಗತ್ಯ ಕಾರ್ಯತಂತ್ರ ರೂಪಿಸಲಾಗುವುದು ಎಂದು ಅನಿವಾಸಿ ಭಾರತೀಯ ಸಮಿತಿ ಕರ್ನಾಟಕದ ಅಧ್ಯಕ್ಷೆ ಹಾಗೂ ವಿಧಾನಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಹೇಳಿದ್ದಾರೆ.

ಕೋಟ ಶ್ರೀಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.

ರಾಜ್ಯ ಸರಕಾರ ಸುಭದ್ರ ಹಾಗೂ ಜನಸ್ನೇಹಿ ಆಡಳಿತ ನೀಡುತ್ತಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದ ಅವರು, ಅಮೃತೇಶ್ವರಿ ದೇಗುಲದ ಅಭಿವೃದ್ಧಿಗೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೆ.ಎಸ್.ಬಸವಂತಪ್ಪ ಅವರೊಂದಿಗೆ ಚರ್ಚಿಸಲಾಗುವುದು. ದೇಗುಲದಲ್ಲಿ ಸಭಾಭವನ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದ ಸಹಕಾರ ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾ ಗುವುದು ಎಂದರು.

ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಆನಂದ ಸಿ.ಕುಂದರ್, ಡಾ. ಆರತಿ ಕೃಷ್ಣ ಅವರನ್ನು ಗೌರವಿಸಿ, ಪ್ರಸಾದ ವಿತರಿಸಲಾಯಿತು. ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ತಿಮ್ಮ ಪೂಜಾರಿ, ಕಿಶನ್ ಹೆಗ್ಡೆ ಕೊಳ್ಕೆ ಬೈಲು, ಅಜಿತ್ ಶೆಟ್ಟಿ ಯಾಳಹಕ್ಲು, ರಮೇಶ್ ಮೆಂಡನ್, ಸೌಜನ್ಯ ಕುರ್ಮಾ ಸಾಲಿಗ್ರಾಮ, ಜಯರಾಮ ಶೆಟ್ಟಿ, ಯುವ ಕಾಂಗ್ರೆಸ್ನ ರಂಜಿತ್ ಬಾರಿಕೆರೆ, ದೇವೇಂದ್ರ ಗಾಣಿಗ, ಗಣೇಶ್ ಪೂಜಾರಿ, ದೇವದಾಸ್ ಕಾಂಚನ್ ಹಾಗೂ ದೇಗುಲದ ಟ್ರಸ್ಟಿಗಳಾದ ಸುಭಾಶ್ ಶೆಟ್ಟಿ ಗಿಳಿಯಾರು, ಚಂದ್ರ ಆರ್ಚಾ, ಶಿವ ಪೂಜಾರಿ, ರತನ್ ಐತಾಳ್, ಗಣೇಶ್ ನೆಲ್ಲಿಬೆಟ್ಟು, ಸುಬ್ರಾಯ ಜೋಗಿ, ಸುಧಾ ಪೂಜಾರಿ, ಜ್ಯೋತಿ ಡಿ. ಕಾಂಚನ್ ಉಪಸ್ಥಿತರಿದ್ದರು.

ಅರ್ಚಕರಾದ ದಾಮೋದರ ಜೋಗಿ, ಸಂದೇಶ್ ಜೋಗಿ ಸೇರಿದಂತೆ ದೇಗುಲದ ಭಕ್ತರು ಹಾಗೂ ಪ್ರಮುಖರು ಹಾಜರಿದ್ದರು.

ಬನ್ನಂಜೆ ದೇವಳ ಭೇಟಿ: ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದೇವಳದ ವತಿಯಿಂದ ಅಭಿವೃದ್ಧಿ ಕಾಮಗಾರಿಗೆ ಅನುದಾನ ಕೋರಿ ಮನವಿ ಸಲ್ಲಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ, ಕಾಂಗ್ರೆಸ್ ಮುಖಂಡರಾದ ರಮೇಶ ಕಾಂಚನ್, ದೇವಳದ ಅರ್ಚಕರಾದ ವಾಸುದೇವ ಉಪಾಧ್ಯಾಯ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪ್ರಭಾಕರ್ ಶೆಟ್ಟಿ, ದಿನೇಶ್ ಪುತ್ರನ್, ಶೇಖರ್ ಶೆಟ್ಟಿ, ಸುದೇಶ್ ಶೇಟ್, ರಾಜೇಶ್ ಬನ್ನಂಜೆ, ಶಮಿತಾ ಎಸ್. ಭಂಡಾರಿ, ವಿದ್ಯಾಲತಾ ಶೆಟ್ಟಿ, ಮೆನೇಜರ್ ರವಿರಾಜ್ ಭಟ್, ಅರುಣ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor