ಉಡುಪಿ ಸೆ.4: ಹೆಬ್ರಿ ತಾಲೂಕು ಶೇಡಿಮನೆ ಗ್ರಾಮ ಅಗಳಿಬೈಲು ನಿವಾಸಿ, ನಿವೃತ್ತ ಪೋಸ್ಟ್ ಮಾಸ್ಟರ್ ಸುರತ್ ಕುಮಾರ್ ಶೆಟ್ಟಿ (64) ಎಂಬವರು ಆ.29ರಂದು ವಾಕಿಂಗ್‌ಗೆ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಗೋಧಿ ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಮಾಸೆಬೈಲು ಪೊಲಿಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor