ಕುಂದಾಪುರ, ಸೆ.4: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ರೊಬ್ಬರು ಮೃತಪಟ್ಟ ಘಟನೆ ವೇಳೆ ಕುಂದಾಪುರದ ಹಂಗಳೂರು ಎಂಬಲ್ಲಿ ನಡೆದಿದೆ.

ಮೃತರನ್ನು ಉತ್ತರ ಪ್ರದೇಶ ಮೂಲದ ರಾಜು ಕಶ್ಯಪ(42) ಎಂದು ಗುರುತಿಸಲಾಗಿದೆ. ಇವರು ಕೆಲಸ ಮಾಡಿ ಕಟ್ಟಡದ 1ನೇ ಮಹಡಿಯಲ್ಲಿ ಉಳಿದುಕೊಂಡಿದ್ದು, ಸೆ.1ರಂದು ರಾತ್ರಿ ಆಕಸ್ಮಿಕವಾಗಿ ಅಂತಸ್ತಿನಿಂದ ಕೆಳಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು, ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೆ.3ರಂದು ರಾತ್ರಿ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor