ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಣ ದಿನಾಚರಣೆ
ಕಾರ್ಕಳ: ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಪದ್ಮಗೋಪಾಲ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಜೆಕಾರು ಜ್ಯೋತಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಸಿಸ್ಟರ್ ಕ್ರಿಸ್ಟಿಲ್ಲ ಬಿ. ಎಸ್. ಮಾತನಾಡಿದರು.
ಇನ್ನೋರ್ವ ಮುಖ್ಯ ಅತಿಥಿ ಮರ್ಣೆ ಗ್ರಾಮ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷ ಪ್ರಭಾವತಿ ನಾಯಕ್ ಶುಭ ಹಾರೈಸಿದರು.
ನಿವೃತ್ತ ಶಿಕ್ಷಕರಾದ ಶಾಂತಿರಾಜ್ ಹೆಗ್ಡೆ, ಭಾಸ್ಕರ್ ಶೆಟ್ಟಿಯವರನ್ನು ಇದೇವೇಳೆ ಸನ್ಮಾನಿಸಲಾಯಿತು.
ಜ್ಞಾನಸುಧಾ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ನ ಟ್ರಸ್ಟಿಗಳಾದ ವಿದ್ಯಾ ಹಾಗೂ ಅನಿಲ್ ಕುಮಾರ್ ಜೈನ್, ಉಪ ಪ್ರಾಂಶುಪಾಲೆ ಆರತಿ, ಸಹಾಯಕ ಸಾರ್ವಜನಿಕ ಸಂಪರ್ಕಾಧಿಕಾರಿ ರಾಮಚಂದ್ರ ನೆಲ್ಲಿಕಾರ್ ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಂಶುಪಾಲ ಸಂತೋಷ್ ಸ್ವಾಗತಿಸಿದರು. ಶಿಕ್ಷಕರಾದ ಆರತಿ, ರಾಮಚಂದ್ರ ನೆಲ್ಲಿಕಾರ್, ನಿಶ್ಮಿತಾ, ಸುಲತಾ ಹಾಗೂ ವಿಜೇತಾರಾಣಿ ಸನ್ಮಾನ ಪತ್ರಗಳನ್ನು ವಾಚಿಸಿದರು.
ಡಾ. ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.