ಶಂಕರನಾರಾಯಣ, ಸೆ.6: ವಿದ್ಯಾರ್ಥಿಗಳು ತಮ್ಮ ಕಾಲೇಜು ಶಿಕ್ಷಣದ ಅನಂತರವೂ ನಿರಂತರ ಅಧ್ಯಯನ ಶೀಲರಾಗಬೇಕು. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ವಿಗಳಿಸ ಬೇಕಾದರೆ ಮನಸ್ಸಿನಲ್ಲಿ ಅವಿರತವಾದ ಛಲ ಬೇಕು. ನಿರಂತರ ಪ್ರಯತ್ನಶೀಲರಾದಾಗ ಮುಂದಿನ ಯಶಸ್ವು ಸಾಧ್ಯ ವಾಗುತ್ತದೆ. ಸಾಧನೆಗೆ ಯಾವುದೇ ಭಾಷೆ ತೊಡಕಲ್ಲ, ಬದಲಾಗಿ ಭಾಷೆಯಲ್ಲಿ ಪ್ರಬುದ್ಧತೆ ಬೆಳೆಸಿಕೊಳ್ಳಬೇಕು ಎಂದು ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್ ಹೇಳಿದ್ದಾರೆ.

ಶಂಕರನಾರಾಯಣ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ವತಿಯಿಂದ ಆಯೋಜಿಸಲಾದ ಸ್ಪರ್ಧಾತ್ಮಕ ಪ್ರೇರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ವಿಶೇಷ ಉಪನ್ಯಾಸ ನೀಡಿದರು.

ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಹಿಸಿದ್ದರು. ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ಟ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕ ವಿಶೇಷ ಸಂಚಿಕೆ ಯುವ ಮಾನಸ ಅನಾವರಣಗೊಳಿಸಲಾಯಿತು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ಡಾ.ದಿವ್ಯಾ, ಹಿರಿಯ ಉಪನ್ಯಾಸಕಿ ಡಾ.ನಳಿನಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor