ಕಾರ್ಕಳ, ಸೆ.8: ವೈಯಕ್ತಿಕ ಕಾರಣದಿಂದ ಮನನೊಂದ ಬೈಲಡ್ಕ ನಿವಾಸಿ ರಾಮಚಂದ್ರ ಜೋಗಿ(67) ಎಂಬವರು ಸೆ.6ರಂದು ರಾತ್ರಿ ವೇಳೆ ಮನೆ ಸಮೀಪದ ಆನೆಕೆರೆ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ದೇವಲಕುಂದ ಗ್ರಾಮದ ಸಂಗೀತ(40) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.7ರಂದು ಬೆಳಗ್ಗೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor