ಕಾರ್ಕಳ : ಕಾರ್ಕಳದ ಶ್ರೀಮದ್ ಭುವನೇಂದ್ರ ವಿದ್ಯಾ ಸಂಸ್ಥೆಯಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಮಾಡಿದ ವಿಶೇಷ ಸಾಧನೆಗೆ ಕೊಡ ಮಾಡುವ ಈ ಬಾರಿಯ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕ ಆರ್.ನಾರಾಯಣ ಶೆಣೈ ಯವರನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ವಿಶೇಷ ಸನ್ಮಾನ ಗೌರವಾಭಿನಂದನೆಯನ್ನು ಸಲ್ಲಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಲೆಕ್ಕ ಪರಿಶೋಧಕ ಕೆ ಕಮಲಾಕ್ಷ ಕಾಮತ್ ಹಾಗೂ ಶಿಕ್ಷಕಿ ನಯನಾ ಶೆಣೈ ಅವರು ಅಭಿನಂದನಾ ಭಾಷಣ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಯೋಗೀಶ್ ಹೆಗ್ಡೆ ವಹಿಸಿ ಮಾತನಾಡುತ್ತಾ ಶುಭ ಹಾರೈಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಅನ್ನಪೂರ್ಣ ಕಾಮತ್, ಭುವನೇಂದ್ರ ವಿದ್ಯಾ ಸಂಸ್ಥೆಯ ಸಂಚಾಲಕ ನರೇಂದ್ರ ಕಾಮತ್ ಕೆ , ಆಡಳಿತ ಮಂಡಳಿ ಸದಸ್ಯ ಜ್ಯೋತಿ ಜೆ ಪೈ , ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾ ಕಿಣಿ, ಕೆ ರವೀಂದ್ರ ಪ್ರಭು ಉಪಸ್ಥಿತರಿದ್ದು ಶುಭ ಹಾರೈಸಿದರು.

ಶಿಕ್ಷಕಿ ಶ್ರೀಲಕ್ಷ್ಮೀ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor