ಉಡುಪಿ, ಸೆ.10: ಉಡುಪಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಜಂಟಿ ಆಶ್ರಯದಲ್ಲಿ ಮುಂಬರುವ ಗಣೇಶೋತ್ಸವ ಅಂಗವಾಗಿ ಗಣೇಶ ಪ್ರತಿಷ್ಠಾಪನಾ ಸಮಿತಿಗಳ ಸದಸ್ಯರ ಪೂರ್ವಭಾವಿ ಸಭೆಯನ್ನು ಗುರುವಾರ ಉಡುಪಿ ಪುರಭವನದಲ್ಲಿ ಆಯೋಜಿಸಲಾಗಿತ್ತು.

ಸಭೆಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಬ್ಬವನ್ನು ಕಾನೂನು ಬದ್ಧವಾಗಿ ಮತ್ತು ಸೌಹಾರ್ದಯುತವಾಗಿ ಆಚರಿಸುವ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ, ಧ್ವನಿವರ್ಧಕಗಳ ಬಳಕೆ, ವಾಹನ ಸಂಚಾರ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಅಗ್ನಿ ಸುರಕ್ಷತೆ ಹಾಗೂ ಪರಿಸರ ಸ್ನೇಹಿ ಆಚರಣೆಗಳಿಗೆ ಸಂಬಂಧಿಸಿದಂತೆ ಸರಕಾರ ಹಾಗೂ ಪೊಲೀಸ್ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಯಿತು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಉಡುಪಿ ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್.ನಾಯ್ಕ್ ಹಾಗೂ ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಇಶಿತಾ ಗುಪ್ತಾ ಉಪಸ್ಥಿತರಿದ್ದರು. ಸಭೆಯಲ್ಲಿ ಜಿಲ್ಲೆಯ ವಿವಿಧ ಗಣೇಶ ಪ್ರತಿಷ್ಠಾಪನಾ ಸಮಿತಿಗಳ ಸದಸ್ಯರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor