ಉಡುಪಿ ಜಯಂಟ್ಸ್ ಗ್ರೂಪ್ನಿಂದ ಶಿಕ್ಷಕರ ದಿನಾಚರಣೆ
ಉಡುಪಿ, ಸೆ.10: ಜಯಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕರಂಬಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಾವಿತ್ರಿ ದಿವಾಕರ್, ದೊಡ್ಡಣಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ನಿರ್ಮಲಾ, ಹನುಮಂತ ನಗರದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಲ್ಲಿಕಾ ಹಾಗೂ ಮೂಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪ್ರೇಮಲತಾ ಗ್ಲಾಡಿಸ್ ಅಮನ್ನಾ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಯಂಟ್ಸ್ ಗ್ರೂಪ್ ಆಫ್ ಉಡುಪಿ ಅಧ್ಯಕ್ಷ ವಿನಯ್ ಕುಮಾರ್ ಪೂಜಾರಿ, ಸೆಂಟ್ರಲ್ ಕಮಿಟಿ ಸದಸ್ಯರಾದ ದಿನಕರ್ ಅಮೀನ್, ನಿರ್ದೇಶಕರಾದ ಡಯಾನಾ ಸುಪ್ರಿಯಾ, ಸಮಿತ್ ಶೆಟ್ಟಿ, ದಯಾನಂದ ಶೆಟ್ಟಿ, ಗಣೇಶ್ ಉರಾಲ್, ವಾದಿರಾಜ್ ಸಾಲ್ಯಾನ್, ರೇಖಾ ಪೈ, ಟೀನಾ ಕುಂದರ್, ಮಾಜಿ ಅಧ್ಯಕ್ಷರಾದ ಎಂ.ಇಕ್ಬಾಲ್ ಮನ್ನಾ, ರಾಜೇಶ್ ಶೆಟ್ಟಿ, ಜಗದೀಶ್ ಅಮೀನ್, ವಿನ್ಸೆಂಟ್ ಸಲ್ದಾನ ಮೊದಲಾದವರು ಗಣೇಶ್ ಉರಾಲ್ ಸ್ವಾಗತಿಸಿದರು. ದಯಾನಂದ ಶೆಟ್ಟಿ ವಂದಿಸಿದರು.