ಉಡುಪಿ, ಸೆ.11: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2025ರ ಫೆ.12ರಂದು ಆಶ್ಲೆ ಕರ್ನೇಲಿಯೋ ಎಂಬಾತ ಉಡುಪಿ ಪುತ್ತೂರಿನ ಸುಬ್ರಹ್ಮಣ್ಯ ನಗರ ನಿವಾಸಿ ಪುಷ್ಪರಾಜ್ ಶೆಟ್ಟಿ ಎಂಬವರಿಗೆ ಯು.ಕೆ. ದೇಶದಲ್ಲಿ ಹೌಸ್ ಕೀಪಿಂಗ್ ಸೂಪರ್‌ವೈಸರ್ ಉದ್ಯೋಗವಿದ್ದು, ವ್ಯವಸ್ಥೆ ಮಾಡಿಕೊಡುವು ದಾಗಿ ತಿಳಿಸಿದ್ದನು. ನಂತರ ಪುಷ್ಪರಾಜ್ ಶೆಟ್ಟಿ, ಸವಿತಾ ಎಂಬಾಕೆಯ ಖಾತೆಗೆ ಯು.ಕೆ. ವೀಸಾ ಪ್ರಕ್ರಿಯೆಗಾಗಿ 2,00,000ರೂ. ಪ್ರೊಸೆಸಿಂಗ್ ಶುಲ್ಕ ಪಾವತಿಸಿದ್ದರು. ಪ್ರಕೃತಿ ಮತ್ತು ಪ್ರಶಾಂತ್ ಎಂಬವರು ಆಶ್ಲೆ ಹಾಗೂ ಸವಿತಾ ಸೇರಿ ಮೆಡಿಕಲ್ ಪರೀಕ್ಷೆ, ವೀಸಾ ಸ್ಟಾಂಪಿಂಗ್ ಹಾಗೂ ಎಂಬಸಿ ಪ್ರೊಸೆಸಿಂಗ್ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 5,73,000ರೂ. ಹಣ ಪಡೆದುಕೊಂಡಿದ್ದರು.

ನಂತರ ಆರೋಪಿಗಳು ವೀಸಾ ತಿರಸ್ಕೃತವಾಗಿದೆ ಎಂದು ಹೇಳಿ ಹಣ ಹಾಗೂ ಪಾಸ್‌ಪೋರ್ಟ್ ವಾಪಸು ನೀಡುವು ದಾಗಿ ತಿಳಿಸಿದ್ದರೂ, ಬಳಿಕ ಫೋನ್ ಸಂಪರ್ಕ ಕಡಿತಗೊಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor