ಉಡುಪಿ, ಸೆ.21: ಉಡುಪಿ ಇಸ್ಲಾಮಿಕ್ ವೆಲ್ಫೇರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾ ಸಭೆಯು ಸೆ.19ರಂದು ಉಡುಪಿ ಜಾಮಿಯಾ ಮಸೀದಿಯ ನೆಲ ಮಾಳಿಗೆಯಲ್ಲಿ ನಡೆಯಿತು.

ಸೊಸೈಟಿಯ ಅಧ್ಯಕ್ಷ ರಿಯಾಝ್ ಅಹ್ಮದ್ ಕುಕ್ಕಿಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ರಯೀಸ್ ಅಹ್ಮದ್ ವಾರ್ಷಿಕ ಮಹಾಸಭೆಯ ಆಮಂತ್ರಣ ಪತ್ರಿಕೆ ಓದಿ ದಾಖಲಿಸಿದರು. ನಿರ್ದೇಶಕ ಅನ್ವರ್ ಅಲಿ ಕಾಪು 2025-26ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾರ್ಯದರ್ಶಿ ಆರೀಫ್ ಕಾಶೀಮ್ ಸಾಹೇಬ್ 2025-26 ನೇ ಸಾಲಿನ ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು. ನಿರ್ದೇಶಕ ಮೊಹಮ್ಮದ್ ಇಕ್ಬಾಲ್ ಕಾಪು 2026-27ರ ಸಾಲಿನ ಅಂದಾಜು ಆಯ-ವ್ಯಯ ಪತ್ರವನ್ನು ಮಂಡಿಸಿದರು.

ಮೌಲಾನ ದಾನಿಶ್ ಪ್ರಾರ್ಥಿಸಿದರು. ಉಪಾಧ್ಯಕ್ಷ ನಿಸಾರ್ ಅಹ್ಮದ್ ಸ್ವಾಗತಿಸಿದರು. ನಿರ್ದೇಶಕ ಜಿ.ಎಂ.ಶರೀಫ್ ಹೂಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor