ಶಿಸ್ತು, ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ.ಪ್ರಸಾದ್ ರಾಮ್‌ಪುರೆ
ಉಡುಪಿ, ಸೆ.21: ವಿದ್ಯಾರ್ಥಿಗಳು ವಿಷಯಗಳನ್ನು ಅಂಕಗಳಿಗಾಗಿ ಕಲಿಯುವುದಕ್ಕಿಂತ ಅವುಗಳನ್ನು ಅರ್ಥ ಮಾಡಿ ಕೊಳ್ಳುವುದು ಮುಖ್ಯ. ಶಿಸ್ತು ಮತ್ತು ತಂಡ ಮನೋಭಾವ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸನ್ನು ಸಾಧಿ ಸಲು ಸಾಧ್ಯ. ಪೋಷಕರು ತಮ್ಮ ಮಕ್ಕಳನ್ನು ಇತರರೊಂದಿಗೆ ಹೋಲಿಕೆ ಮಾಡದೆ ಅವರಿಗೆ ಅಗತ್ಯವಾದ ಬೆಂಬಲ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವದ್ಯಾಲಯದ ಕುಲಸಚಿವ ಡಾ.ಪ್ರಸಾದ್ ಬಿ.ರಾಮ್‌ಪುರೆ ಹೇಳಿದ್ದಾರೆ.
ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 2026-27ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಅಧ್ಯಕ್ಷತೆಯನ್ನು ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷ ಪಿ.ಶ್ರೀನಿವಾಸ ತಂತ್ರಿ ವಹಿಸಿದ್ದರು. ಬೆಂಗಳೂರು ಟಿಸಿಎಸ್ ಗ್ಲೋಬಲ್ ಟೆಕ್ನಾಲಜೀಸ್‌ನ ಮುಖ್ಯಸ್ಥ ಪುರುಷೋತ್ತಮ ಎಸ್., ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನಕುಮಾರ್, ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್ ಮಾತನಾಡಿದರು.
ಈ ಸಂದರ್ಭದಲ್ಲಿ ಸಿಇಟಿಯಲ್ಲಿ ಉತ್ತಮ ರ್ಯಾಂಕ್ ಪಡೆದ ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿ ಸಲಾಯಿತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವದ್ಯಾಲಯದ ಮಾಜಿ ಕುಲಸಚಿವ ಹಾಗೂ ಎನ್‌ಐಟಿಕೆ ಸುರತ್ಕಲ್‌ನ ಮಾಜಿ ನಿರ್ದೇಶಕ ಡಾ.ಎಚ್.ಸುಧಾಕರ್ ನಾಯಕ್, ಸಂಸ್ಥೆಯ ಡೀನ್(ಆರ್‌ಸಿ)ಡಾ.ಸಚಿನ್ ಭಟ್, ಪರೀಕ್ಷಾ ನಿಯಂತ್ರಕಿ ಡಾ.ಸೌಮ್ಯ ಜೆ ಭಟ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ದೀಪಿಕಾ ಬಿ. ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲ ಡಾ.ನಾಗರಾಜ್ ಭಟ್ ಸ್ವಾಗತಿಸಿದರು. ಶೈಕ್ಷಣಿಕ ಭಾಗದ ಡೀನ್ ಡಾ.ಸುದರ್ಶನ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಯೋಜಕಿ ಡಾ. ಲೊಲಿಟ ಪ್ರಿಯ ಕ್ಯಾಸ್ತಲಿನೊ ವಂದಿಸಿದರು. ಪ್ರಾಧ್ಯಾಪಕ ರಾದ ಅನಂತ್ ಮೋಹನ್ ಮಲ್ಯ ಮತ್ತು ರೇಶ್ಮಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು.