ಕಾಪು, ಸೆ.21: ವಿಪರೀತ ಸರಾಯಿ ಕುಡಿಯುವ ಚಟ ಹೊಂದಿದ್ದ ಸುಭಾಷ್ ನಗರ ನಿಲ್ದಾಣದ ರಿಕ್ಷಾ ಚಾಲಕ ಮೂಡಬೆಟ್ಟು ಗ್ರಾಮದ ಪ್ರಾಣೇಶ್(44) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಹೊಂದಿ ಸೆ.19ರಂದು ರಾತ್ರಿ ಮನೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಕುಕ್ಕುಂದೂರು ಗ್ರಾಮದ ಕೃಷ್ಣ ನಾಯ್ಕ್(71) ಎಂಬವರು ಸೆ.19ರಂದು ರಾತ್ರಿ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor