ದನ ಕಳವು ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಕಾಪು, ಸೆ.21: ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಸೆ.19ರಂದು ವಸಂತಿ ಸುನೀತಾ ಕ್ವಾಡ್ರಸ್ ಎಂಬವರು ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಾಪು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸೆ.19ರಂದು ಕಳತ್ತೂರಿನ ಉಮ್ಮರಬ್ಬ(64) ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಳಿಕ ಸೆ.20ರಂದು ತಲೆಮರೆಸಿ ಕೊಂಡಿದ್ದ ಆರೋಪಿಗಳಾದ ಕಳತ್ತೂರಿನ ಶರೀಫ್(31), ಶಂಶುದ್ದೀನ್(57), ಆಸೀರ್(24) ಕಾಪುವಿನ ಕೊಪ್ಪಲಂಗಡಿ ಎಂಬಲ್ಲಿ ಬಂಧಿಸಲಾಯಿತು. ಕೃತ್ಯಕ್ಕೆ ಬಳಸಿದ್ದ ವಾಹನ ಮತ್ತು ದನವನ್ನು ವಶಪಡಿಸಿಕೊಳ್ಳಲಾಗಿದೆ.