ಬೇಳಂಜೆಯಲ್ಲಿ ಕಾಣಿಸಿಕೊಂಡ ಕಪ್ಪು ಚಿರತೆ
ಹೆಬ್ರಿ, ಸೆ.22: ಕುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಳಂಜೆ ದೊಡ್ಡಮನೆ ಗಣೇಶ್ ಶೆಟ್ಟಿ ಅವರ ಮನೆಯ ಹಟ್ಟಿಯ ಹಿಂಭಾಗದಲ್ಲಿ ರವಿವಾರ ಮುಂಜಾನೆ ಕಪ್ಪು ಚಿರತೆಯೊಂದು ಕಾಣಿಸಿಕೊಂಡಿದೆ.
ಪರಿಸರದಲ್ಲಿ ಹಲವು ಸಮಯಗಳಿಂದ ಓಡಾಟ ನಡೆಸುತ್ತಿರುವ ಚಿರತೆ ಯಿಂದ ಬೇಳಂಜೆ ಪರಿಸರದಲ್ಲಿ ಭಯದ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆಯವರು ಕೂಡಲೇ ಸ್ಪಂದಿಸಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯ ಮುಖಂಡ ಅಮೃತ್ ಕುಮಾರ್ ಶೆಟ್ಟಿ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.