ಉಡುಪಿ, ಸೆ.22: ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ (ಸಿ.ಎಂ. ಕಪ್) ಕ್ರೀಡಾಕೂಟದ ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್, ನೆಟ್‌ಬಾಲ್, ಹ್ಯಾಂಡ್‌ಬಾಲ್, ತ್ರೋಬಾಲ್ ಮತ್ತು ಈಜು ಸ್ಪರ್ಧೆಗಳನ್ನು ಸೆ.26ರಂದು ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗುತ್ತಿದೆ.

ಈ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳು ಆನ್‌ಲೈನ್ ಮೂಲಕ ನೋಂದಾವಣೆ ಮಾಡಿದ ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳೊಂದಿಗೆ ಸೆ.26ರ ಬೆಳಗ್ಗೆ 8:30ಕ್ಕೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಕಚೇರಿಯ ದೂರವಾಣಿ ಸಂಖ್ಯೆ:0820-2521324ನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor