ಕಾರ್ಕಳ: ಗ್ರಂಥಾಲಯದಲ್ಲಿ ಸಾಹಿತಿ ಸೌರಭ
ಉಡುಪಿ, ಸೆ.22: ಜಿಲ್ಲಾ ಕೇಂದ್ರ ಗ್ರಂಥಾಲಯದ ವತಿಯಿಂದ ಕಾರ್ಕಳ ಶಾಖಾ ಗ್ರಂಥಾಲಯದಲ್ಲಿ ಸೆಪ್ಟೆಂಬರ್ 24ರ ಅಪರಾಹ್ನ 3:00 ಗಂಟೆಗೆ ಸಾಹಿತಿ ಸೌರಭ ಕಾರ್ಯಕ್ರಮ ನಡೆಯಲಿದ್ದು, ಈ ವಾರದ ಅತಿಥಿಯಾಗಿ ಸಾಹಿತಿ, ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತರಾದ ಸಾವಿತ್ರಿ ಮನೋಹರ್ ಕಾರ್ಕಳ ಇವರು ತಾವು ಬರೆದ ಪುಸ್ತಕದ ಕುರಿತು ಅಭಿಪ್ರಾಯ ಮಂಡಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಓದುಗರು ಆಗಮಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಧಿಕಾರಿಗಳ ಪ್ರಕಟಣೆ ತಿಳಿಸಿದೆ.