ಬ್ರಹ್ಮಾವರ, ಸೆ.23: ಮಾನಸಿಕ ಖಿನ್ನತೆಗೆ ಒಳಗಾಗಿ ಸೆ.16ರಂದು ಬೆಳಗ್ಗೆ ಮನೆಯಲ್ಲಿಟ್ಟಿದ್ದ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ಸಸ್ಥಗೊಂಡಿದ್ದ ಯಡ್ತಾಡಿ ಗ್ರಾಮದ ಮಂಗಳಾ(21) ಎಂಬವರು ಸೆ.22ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ಪಾರ್ಶ್ವವಾಯು ಖಾಯಿಲೆಯಿಂದ ಬಳಲುತ್ತಿದ್ದ ಮೊಳಹಳ್ಳಿ ಗ್ರಾಮದ ಕಾಜಾಡಿ ಮನೆ ಕೂರಾಳ ನಿವಾಸಿ ಕರುಣಾಕರ ಶೆಟ್ಟಿ (52) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.22ರಂದು ಬೆಳಗ್ಗೆ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor