ಉಡುಪಿ: ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇನ್ನೂ ಎರಡು ಮಹಿಳಾ ವಸತಿ ನಿಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದ್ದಾರೆ.

ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಅವರು ವಿದ್ಯಾರ್ಥಿನಿಯರನ್ನುದ್ದೇಶಿಸಿ ಮಾತನಾಡುತಿದ್ದರು.

ಮೂರು ಜಿಲ್ಲೆಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಯಾಬಿನೆಟ್ 32,000 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಲೇಜಿನ ಪ್ರಾಂಶುಪಾಲ ಪ್ರೊ.ನಿಕೇತನ, ವಿದ್ಯಾರ್ಥಿ ಕ್ಷೇಮಪಾಲನಾಧಿ ಕಾರಿ ಪ್ರೊ.ರಾಜೇಂದ್ರ ಕೆ., ಐಕ್ಯೂಎಸಿ ಸಂಚಾಲಕಿ ಪ್ರೊ.ಶ್ರೀಮತಿ ಅಡಿಗ, ಪ್ರಾಧ್ಯಾಪಕರಾದ ಪ್ರೊ.ಪಿ.ಬಿ. ಪ್ರಸನ್ನ, ವಿದ್ಯಾಡಿ., ಡಾ.ಮಣಿಭೂಷಣ್ ಡಿಸೋಜ, ಜಯಲಿಂಗ ಮೂರ್ತಿ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor