ಉಡುಪಿ, ಸೆ.25: ಡಾ.ಶಿವರಾಮ ಕಾರಂತರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ ಘನತೆ ತಂದವರು. ಸ್ವಾತಂತ್ರ್ಯ ಪೂರ್ವದಲ್ಲಿ ನಾಡಿನ ಸಮಾನತೆಯನ್ನು ಪ್ರತಿಪಾದಿಸಿದವರು. ವೈಚಾರಿಕ ಚಿಂತನೆಯ ಕೊಂಡಿ ಯಾಗಿ ರುವ ಕಾರಂತರು ಕರ್ನಾಟಕದ ವೈಚಾರಿಕ ಮತ್ತು ವೈಜ್ಞಾನಿಕ ಪ್ರಜ್ಞೆಯ ಪ್ರತಿನಿಧಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ಎಸ್.ತಂಗಡಗಿ ಹೇಳಿದ್ದಾರೆ.

ಡಾ.ಶಿವರಾಮ ಕಾರಂತ ಟ್ರಸ್ಟ್‌ನ ಕಾರ್ಯಕ್ರಮಗಳ ಕುರಿತ ವಾರ್ತಾ ಸಂಚಯವನ್ನು ಶುಕ್ರವಾರ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಚಟುವಟಿಕೆಗಳನ್ನು ಶ್ಲಾಘಿಸಿದ ಸಚಿವರು ಕಾರಂತರ 125 ನೇ ಜನ್ಮ ದಿನಾಚರಣೆಯನ್ನು ಶಿಷ್ಟ ರೀತಿಯಲ್ಲಿ ಆಚರಿಸಲು ಅನುದಾನದ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಸಚಿವರನ್ನು ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಸನ್ಮಾನಿಸಿದರು. ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ, ಟ್ರಸ್ಟಿನ ಸದಸ್ಯ ಜಿ.ಎಂ.ಶರೀಫ್ ಹೂಡೆ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor