ಗಂಗೊಳ್ಳಿ, ಸೆ.26: ಬೋಟಿನಿಂದ ಬಿದ್ದು ಗಾಯಗೊಂಡಿದ್ದ ಮೀನು ಗಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಕಿರಿಮಂಜೇಶ್ವರ ಗ್ರಾಮದ ಕೊಡೇರಿ ನಿವಾಸಿ ಜನಾದರ್ನ ಖಾರ್ವಿ(66) ಎಂದು ಗುರುತಿಸಲಾಗಿದೆ. ಇವರು ಗಂಗೊಳ್ಳಿಯಲ್ಲಿ ಶ್ರೀಗುರು ಪರ್ಸಿನ್ ಮೀನುಗಾರಿಕೆ ಬೋಟ್ ನಲ್ಲಿ ಕೆಲಸ ಮಾಡಿಕೊಂಡಿದ್ದು, 2025ರ ಡಿ.7ರಂದು ಬೋಟ್‌ನ ಎತ್ತರದಲ್ಲಿ ರೋಪ್ ಅನ್ನು ಕಟ್ಟುತ್ತಿರುವಾಗ ಅಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಜ.5ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.

ಸೆ.13ರಂದು ಮತ್ರೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಅವರು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿ ದ್ದರು. ಸೆ.26ರಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾಗಿ ಗಂಭೀರವಾಗಿ ಅಸ್ವಸ್ಥಗೊಂಡ ಜನಾರ್ದನ ಖಾರ್ವಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor