ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ
ಕುಂದಾಪುರ, ಸೆ.27: ವಂಡ್ಸೆ ಭಾಗದ ಪ್ರಮುಖ ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದ ಹಾಗೂ ನಾಲ್ಕು ಬಾರಿ ವಂಡ್ಸೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಉದಯ್ ಕುಮಾರ್ ಶೆಟ್ಟಿ ಅಡಿಕೆಕೊಡ್ಲು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯ್ ಕುಮಾರ್ ಶೆಟ್ಟಿ ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನವಾಗಿ ಪಕ್ಷಕ್ಕೆ ಸೇರ್ಪಡೆ ಗೊಂಡ ಉದಯ್ ಕುಮಾರ್ ಶೆಟ್ಟಿ ಅವರನ್ನು ಸ್ವಾಗತಿಸಿದರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಉದಯ್ ಕುಮಾರ್ ಶೆಟ್ಟಿ ಅವರ ಸೇರ್ಪಡೆ ಯಿಂದ ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.