ರೈಲ್ವೆ ನಿಲ್ದಾಣಗಳಲ್ಲಿ ಬೀದಿ ನಾಟಕ ಪ್ರದರ್ಶನ
ಉಡುಪಿ, ಸೆ.28: ಸ್ವಚ್ಛತಾ ಹಿ ಸೇವಾ-2026ರ ಅಂಗವಾಗಿ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ವಿದ್ಯಾರ್ಥಿಗಳಿಂದ ಬೀದಿ ನಾಟಕ (ನುಕ್ಕಡ್ ನಾಟಕ) ಪ್ರದರ್ಶನ ರೈಲ್ವೆ ನಿಲ್ದಾಣಗಳಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾರವಾರ ಪ್ರಾದೇಶಿಕ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ, ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ನಿರ್ದೇಶಕಿ ಡಾ.ಶುಭಾ, ಡಾ.ಕಾರ್ತಿಕೇಯ ಗೋಸ್ವಾಮಿ, ಸಹಾಯಕ ಪ್ರಾಧ್ಯಾಪಕ ಚಂದಕುಮಾರ್ ಉಪಸ್ಥಿತರಿದ್ದರು.
ಡಾ.ಸುಬ್ರಮಣ್ಯ ಭಟ್ ಉಡುಪಿ ಜಿಲ್ಲೆಯ ಸಂಕ್ಷಿಪ್ತ ಇತಿಹಾಸ ಹಾಗೂ ಸಾಂಸ್ಕೃತಿಕ ಪರಂಪರೆಯ ಕುರಿತು ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳಿಂದ ಹುಲಿವೇಷ ನೃತ್ಯ ಪ್ರದರ್ಶನ ನಡೆಯಿತು.
ಸ್ವಚ್ಛ ಪ್ರವಾಸಿ ತಾಣಗಳು ಮತ್ತು ಪಾರಂಪರಿಕ ರೈಲ್ವೆ ತಾಣಗಳು’ ಹಾಗೂ ವಿಶ್ವ ಪ್ರವಾಸೋದ್ಯಮ ದಿನದ ಅಂಗ ವಾಗಿ ಈ ಬೀದಿ ನಾಟಕವನ್ನು ಉಡುಪಿ, ಬೈಂದೂರು ಮೂಕಾಂಬಿಕಾ ರೋಡ್ ರೈಲು ನಿಲ್ದಾಣ ಹಾಗೂ ಮುರ್ಡೇಶ್ವರ ರೈಲು ನಿಲ್ದಾಣಗಳಲ್ಲಿ ಪ್ರದರ್ಶಿಸಲಾಯಿತು.
ಡಾ.ಸುಬ್ರಮಣ್ಯ ಭಟ್ ಸ್ವಾಗತಿಸಿದರು. ಕಾರವಾರ ಪ್ರಾದೇಶಿಕ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ವಂದಿಸಿದರು.