ಅರೆಕಾಲಿಕ ಕಾನೂನು ಸ್ವಯಂಸೇವಕರ ಹುದ್ದೆ: ಅರ್ಜಿ ಆಹ್ವಾನ
ಉಡುಪಿ, ಸೆ.28: ಬೈಂದೂರು ತಾಲೂಕು ಕಾನೂನು ಸೇವೆಗಳ ಸಮಿತಿಯಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಮನೋಭಾವನೆ ಹೊಂದಿರುವ ಹಾಗೂ ಕಾನೂನು ಸಲಹಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ಆಸಕ್ತರು ಸೆ.30ರ ಒಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯ, ಉಡುಪಿ ಇದರ ವೆಬ್‌ಸೈಟ್ ಅಥವಾ ಸಮೀಪದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು ಎಂದು ಬೈಂದೂರು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.