ಬ್ರಹ್ಮಾವರ, ಸೆ.28: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಉತ್ತರ ಪ್ರದೇಶ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಸೆ.27ರಂದು ರಾತ್ರಿ ವೇಳೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಉತ್ತರ ಪ್ರದೇಶ ರಾಜ್ಯದ ಕಿಶೋರ್ ಮೊಹಂತಿ ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಶಿಫ್ ಯಾರ್ಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, ಇತರರೊಂದಿಗೆ ಹಂಗಾರಕಟ್ಟೆಯಿಂದ ಊಟಕ್ಕೆ ಬ್ರಹ್ಮಾವರಕ್ಕೆ ಬಂದಿದ್ದರು. ಅಲ್ಲಿ ಹೊಟೇಲ್‌ನಿಂದ ಊಟ ಪಡೆದು, ರಸ್ತೆ ದಾಟುತ್ತಿದ್ದಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಅತೀವೇಗ ಮತ್ತು ಅಜಾಗರೂಕತೆಯಿಂದ ಕಿಶೋರ್ ಮೊಹಂತಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಕಿಶೋರ್ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor