ಉಡುಪಿ, ಸೆ.29: ಸಮಾಜದಲ್ಲಿನ ಅನೇಕ ತಾರತಮ್ಯಗಳನ್ನು ಹೋಗಲಾಡಿಸಿ ಸಮಾನತೆಯ ದೃಢ ಸಂಕಲ್ಪವನ್ನು ತೊಟ್ಟಿದ್ದ ಡಾ.ಬಿ.ಆರ್. ಅಂಬೇಡ್ಕರ್‌ರವರು ದೌರ್ಜನ್ಯ-ತಾರತಮ್ಯದಿಂದ ನೊಂದವರಿಗೆ ಧನಿಯಾಗಿ ಜನರಲ್ಲಿ ಹೊಸ ಚಿಂತನೆಯನ್ನು ಮೂಡಿಸಿದರು. ಅಂಬೇಡ್ಕರ್‌ರವರು ಜ್ಞಾನ ಸಾಗರ ಅವರ ಆದರ್ಶಗಳು ಬದುಕಿದ ರೀತಿ ಪ್ರತಿಯೊಬ್ಬರಿಗೂ ದಾರಿದೀಪ ಎಂದು ವಕೀಲ ಮಂಜುನಾಥ ಗಿಳಿಯಾರು ಹೇಳಿದ್ದಾರೆ.

ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮವದಲ್ಲಿ ಅವರು ಉಪನ್ಯಾಸ ನೀಡಿದರು.

ಮಹಿಳೆಯರ ಸ್ವಾತಂತ್ರ್ಯ ಸಮಾನತೆಗಾಗಿ ಹೋರಾಡಿದ ಅವರು ಮಹಿಳೆಯರಿಗೆ ಸಮಾಜದಲ್ಲಿ ಸಮಾನ ಗೌರವ ವನ್ನು ಒದಗಿಸುವುದರ ಜೊತೆಗೆ ಮಹಿಳೆಯರ ಶಿಕ್ಷಣಕ್ಕೆ ಪ್ರಾಮುಖ್ಯತೆಯನ್ನು ನೀಡಿ ಇಂದು ಮಹಿಳೆಯರು ಶಿಕ್ಷಣ ಪಡೆಯುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ಎಂದರು

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಡಾ.ಜಯ ಪ್ರಕಾಶ್ ಶೆಟ್ಟಿ ಎಚ್. ಮಾತನಾಡಿ, ಗಾಂಧೀಜಿ ಹಾಗೂ ಅಂಬೇಡ್ಕರ್ ದೇಶದ ಅಭಿವೃದ್ಧಿ ಮತ್ತು ಸ್ವತಂತ್ರಕ್ಕಾಗಿ ಅನೇಕ ಕೊಡುಗೆಗಳನ್ನು ನೀಡಿದ್ದು, ಇಂದಿನ ಯುವ ಪೀಳಿಗೆಯು ಅವರ ಸಿದ್ಧಾಂತ ಹಾಗೂ ಮಾರ್ಗದರ್ಶಗಳನ್ನು ಅನುಸರಿಸಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿ ಕ್ಷೇಮಪಾಲನಾಧಿ ಕಾರಿ ಡಾ.ಸೌಮ್ಯಲತಾ ಪಿ., ಐ.ಕ್ಯೂ.ಎ.ಸಿ ಸಂಚಾಲಕ ಡಾ.ಲಿತಿನ್ ಬಿ.ಎಂ. ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸಾವ್ತಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಪಂಜು ಕಾರ್ಯಕ್ರಮ ನಿರೂಪಿಸಿ, ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಮೀನಾಕ್ಷಿ ನಾಯ್ಕ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor