ಕುಂದಾಪುರ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ’ಸೇವಾ ಸಂಕಲ್ಪ ಅಭಿಯಾನ’ದಡಿ ’ಅಂಗನ್ ಕಾ ಮಿಲನ್’ ಕಾರ್ಯಕ್ರಮವನ್ನು ಮಂಗಳವಾರ ಬೆಳ್ವೆಯ ವಾಸುಕಿ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ, ಸುಕನ್ಯಾ ಸಮೃದ್ಧಿ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗಳು ಅಂಗನವಾಡಿ ಕೇಂದ್ರಗಳ ಮೂಲಕವೇ ಸಮಾಜದ ಕಟ್ಟ ಕಡೆಯ ಮಗುವನ್ನು ತಲುಪುತ್ತಿವೆ. ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯ ದತ್ತ ಸಾಗಿದೆ’ ಎಂದು ಹೇಳಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ 23 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸನ್ಮಾನಿಸಲಾಯಿತು. ಅಂಗನವಾಡಿ ಮಕ್ಕಳಿಗೆ ಕಲಿಕಾ ಪರಿಕರಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ’ಸೇವಾ ಸಂಕಲ್ಪ ಅಭಿಯಾನ’ದ ಜಿಲ್ಲಾ ಸಂಚಾಲಕ ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಗಿರೀಶ್ ಎಂ.ಅಂಚನ್, ಶಿವಕುಮಾರ್ ಅಂಬಲಪಾಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಸ್ಥಳೀಯ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ರಾಧಾ ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು. ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಜ್ಯೋತಿ ರಮೇಶ್ ವಂದಿಸಿದರು. ಕುಂದಾಪುರ ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಸುದರ್ಶನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor