ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ
ಕುಂದಾಪುರ, ಸೆ.29: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಕೊಡಪಾಡಿ- ಗುಜ್ಜಾಡಿ, ರೋಟರಿ ಕ್ಲಬ್ ಗಂಗೊಳ್ಳಿ, ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ, ಶ್ರೀ ನಾರಾಯಣ ಗುರು ಜನಸೇವಾ ಬಳಗ ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ ಗಂಗೊಳ್ಳಿಯ ಶ್ರೀಸೀತಾರಾಮಚಂದ್ರ ಸಭಾಭವನದಲ್ಲಿ ಸೋಮವಾರ ಜರಗಿತು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಉದ್ಘಾಟಿಸಿದರು.
ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಗಂಗೊಳ್ಳಿ ಗ್ರಾಪಂ ಪಿಡಿಒ ರವಿ, ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧಾ ಹಾದಿಮನೆ, ಜಿಲ್ಲಾ ಮಹಿಳಾ ಮಕ್ಕಳ ಅಧಿಕಾರಿ ವಿಜಯಲಕ್ಷ್ಮೀ ಶುಭ ಹಾರೈಸಿದರು.
ಇದೇ ಸಂದರ್ಭ ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸಿಂಗ್ ಅಧಿಕಾರಿ ಶೋಭಾ ಕೆ., ಗಂಗೊಳ್ಳಿಯ ಉದ್ಯಮಿ ವಿಠಲ ಬಿ.ಶೆಣೈ, ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಕ್ರೆಸೆನ್ಸ್, ಛಾಯಾಗ್ರಾಹಕ ಕೃಷ್ಣ ಖಾರ್ವಿ ಅವರನ್ನು ಸಮ್ಮಾನಿಸಲಾಯಿತು.
ಗಂಗೊಳ್ಳಿ ಗ್ರಾಮದ ಪೌರ ಕಾರ್ಮಿಕರು ಹಾಗೂ ಎಸ್‌ಎಲ್‌ಆರ್‌ಎಂ ಘಟಕದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಕಾರ್ಯದರ್ಶಿ ಗಿರೀಶ ಖಾರ್ವಿ, ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿಲಿಂಗೇಶ್ವರ ರ್ಆ., ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಕಾರ್ಯದರ್ಶಿ ಈಶ್ವರ ಜಿ., ಉಡುಪಿ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಕಾರ್ಯದರ್ಶಿ ಪ್ರೇಮಾ ಮಂಜುನಾಥ, ಗ್ರಾಪಂ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
ಗಂಗೊಳ್ಳಿ ವಲಯ ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ. ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.