ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ
ಉಡುಪಿ, ಸೆ.29:ಮೈಸೂರು ದಸರಾ ಉತ್ಸವ- 2026 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026ನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಎದುರು, ಮೈಸೂರು ಇಲ್ಲಿ ಏರ್ಪಡಿಸಲಾಗುವುದು.
ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು - ಅವರ ಹೆಸರಿನಲ್ಲಿ ಡಿಡಿಯನ್ನು ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಡಿಡಿಯೊಂದಿಗೆ ಅ.5ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - ಅವರ ಹೆಸರಿಗೆ ನೊಂದಾಯಿತ ಅಂಚೆ ಅಥವಾ ಮುದ್ದಾಂ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು, ದೂ.ಸಂಖ್ಯೆ :080-22484516ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.