ಯುವತಿ ನಾಪತ್ತೆ
ಉಡುಪಿ, ಸೆ.29: ಹುಬ್ಬಳ್ಳಿ ಜಿಲ್ಲೆ ಉನ್ಕಲ್ ಸಾಯಿನಗರದ ಅಚ್ಚವ್ವನ ಕಾಲೋನಿಯ ನಿವಾಸಿ ಮೇಘಾ ಕಂಚಿ (20) ಎಂಬ ಯುವತಿ ಸೆ.7ರಂದು ಅಪರಾಹ್ನ 3:30ರ ಸುಮಾರಿಗೆ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಅಜ್ಜರಕಾಡಿನಲ್ಲಿರುವ ಸಂಬಂಧಿಕರ ಮನೆಯಿಂದ ಹೋದವರು ಮರಳಿ ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ.
5 ಅಡಿ 1 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ. ಸಂಖ್ಯೆ:0820-2526444, ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು ಉಡುಪಿ ದೂ.ಸಂಖ್ಯೆ: 9080805445 ಅನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಠಾಣಾ ಪ್ರಭಾರ ಕರ್ತವ್ಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.