ಪ್ರೊ.ಮುರುಗೇಶಿಗೆ ಡಾ.ಶ್ರೀನಿವಾಸ ಹಾವನೂರು ಪ್ರಶಸ್ತಿ
ಉಡುಪಿ, ಸೆ.30: ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ ಖ್ಯಾತ ಸಂಶೋಧಕ ಡಾ.ಶ್ರೀನಿವಾಸ ಹಾವನೂರು ನೆನಪಿನಲ್ಲಿ ನೀಡುವ ಈ ಸಾಲಿನ ಪ್ರಶಸ್ತಿಗೆ ಉಡುಪಿಯ ಖ್ಯಾತ ಇತಿಹಾಸ ತಜ್ಞ, ಪುರಾತತ್ತ್ವ ಸಂಶೋಧಕ ಪ್ರೊ.ಟಿ.ಮುರುಗೇಶಿ ಆಯ್ಕೆಯಾಗಿದ್ದಾರೆ.
ಅಕ್ಟೋಬರ್ ತಿಂಗಳ 23ರಿಂದ 25ರವರೆಗೆ ಮೂರು ದಿನಗಳ ಕಾಲ ಬೀದರ್ ಜಿಲ್ಲೆಯ ಬಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ನಡೆಯಲಿರುವ ಕರ್ನಾಟಕ ಇತಿಹಾಸ ಅಕಾಡೆಮಿಯ 40ನೇ ವಾರ್ಷಿಕ ಸಮ್ಮೇಳನದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿಯು 10,000ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ ಎಂದು ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷ ಡಾ.ದೇವರಕೊಂಡಾ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.