ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆ, ಸಂಸ್ಥೆಗಳು ಮತ್ತು ವಿವಿಧ ಸಾಂಧಾನಿಕ ಸಂಸ್ಥೆ, ಶಾಸನಬದ್ದ ಸಂಸ್ಥೆ, ನ್ಯಾಯಮಂಡಳಿ ಹಾಗೂ ಕಛೇರಿಗಳಲ್ಲಿ ಖಾಲಿ ಇರುವ ಲೋವರ್ ಡಿವಿಜಿನಲ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ಸ್ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ವೆಬ್‌ಸೈಟ್ ನಲ್ಲಿ ಉದ್ಯೋಗಾ ಕಾಂಕ್ಷಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲಿಚ್ಛಿಸುವ 18ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹೈಯರ್ ಸೆಕೆಂಡರಿ (10+2) ಪೂರ್ಣಗೊಳಿಸಿರಬೇಕು. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಆಯ್ಕೆಯನ್ನು ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 7 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:080-25502520, 25527342 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor