ಉಡುಪಿ, ಅ.5: ಪ್ರಧಾನಿ ನರೇಂದ್ರ ಮೋದಿಯವರ ನಿರಂತರ 25 ವರ್ಷಗಳ ರಾಷ್ಟ್ರಸೇವೆ ಸುಸಂದರ್ಭದಲ್ಲಿ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಅಂಗಳದ ಉತ್ಸವ ಕಾರ್ಯಕ್ರಮದಲ್ಲಿ ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಉಡುಪಿ ನಗರ ವ್ಯಾಪ್ತಿಯ 115 ಅಂಗವಾನಡಿ ಕೇಂದ್ರಗಳ ಶಿಕ್ಷಕಿ ಹಾಗೂ ಸಹಾಯಕರಿಗೆ ಅಭಿನಂದನಾ ಸಮಾರಂಭವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಮಕ್ಕಳ ಪೌಷ್ಟಿಕತೆ, ಆರೋಗ್ಯ, ಪೂರ್ವ ಪ್ರಾಥಮಿಕ ಶಿಕ್ಷಣದ ಜೊತೆಗೆ ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆಯಲ್ಲಿ ವಿಶೇಷ ಕೊಡುಗೆ ನೀಡುತ್ತಿರುವ ಅಂಗನವಾಡಿ ಶಿಕ್ಷಕಿಯರ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸುವ ಕಾರ್ಯ ಅತ್ಯಂತ ಅರ್ಥ ಪೂರ್ಣವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಸರಕಾರ ಅಂಗನವಾಡಿ ಶಿಕ್ಷಕರಿಗೂ ಸರಕಾರಿ ಉದ್ಯೋಗದ ಎಲ್ಲಾ ಸೌಲಭ್ಯಗಳು ಒದಗಿಸುವಂತೆ ಸರಕಾರಕ್ಕೆ ಮನವಿ ಮಾಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ನಗರ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷ ನೀತಾ ಪ್ರಭು, ಪಕ್ಷದ ಪ್ರಮುಖರಾದ ಶ್ರೀಮತಿ ಸಂಧ್ಯಾ ರಮೇಶ್, ಶಿಲ್ಪಾ ಜಿ.ಸುವರ್ಣ, ಕಿರಣ್ ಕುಮಾರ್ ಬೈಲೂರು, ಪ್ರಭಾಕರ ಪೂಜಾರಿ, ಶ್ರೀಕಾಂತ ನಾಯಕ್ ಅಲೆವೂರು, ರೇಷ್ಮಾ ಉದಯ ಶೆಟ್ಟಿ, ಶ್ಯಾಮಲಾ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor