ಕರಾವಳಿ ಹೈಕೋರ್ಟ್ ಪೀಠ ಹೋರಾಟಕ್ಕೆ ಬೆಂಬಲ
ಉಡುಪಿ, ಅ.7: ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆಯವರನ್ನು ಭೇಟಿ ಮಾಡಿ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಯ ಬೇಡಿಕೆಯನ್ನು ಬೆಂಬಲಿಸುವಂತೆ ಮನವಿ ಮಾಡಲಾಯಿತು.
ನಮ್ಮ ಮನವಿಗೆ ಸ್ಪಂದಿಸಿದ ನ್ಯಾಯಮೂರ್ತಿ ಹೆಗ್ಡೆ, ಈ ಬಗ್ಗೆ ತಮ್ಮ ಬೆಂಬಲವನ್ನು ಸೂಚಿಸಿ ಅತೀ ಶೀಘ್ರದಲ್ಲಿ ಪೀಠ ಸ್ಥಾಪನೆ ಆಗುವ ಭರವಸೆ ವ್ಯಕ್ತ ಪಡಿಸಿ, ನಮ್ಮ ಈ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು ಎಂದು ನ್ಯಾಯವಾದಿ ಹಾಗೂ ಹೋರಾಟ ಸಮಿತಿಯ ಸಂಚಾಲಕ ಪ್ರೇಮ್ ಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.