ಉಡುಪಿ, ಅ.7: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪ್ರಸಕ್ತ ಸಾಲಿಗೆ ಪ.ಜಾತಿ/ಪ.ಪಂ/ಹಿಂದುಳಿದ ವರ್ಗ/ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆ ಯರಿಂದ 5 ವಾರದ 20 ದೇಶಿ/ನಾಟಿ ಕೋಳಿ ಮರಿಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತ ಮಹಿಳೆಯರು ಅಕ್ಟೋಬರ್ 31ರ ಒಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯ ಸಂಸ್ಥೆ, ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor