ಮಲ್ಪೆ, ಅ.7: ಬೋಟಿನಿಂದ ಅಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಹೊನ್ನಾವರ ತಾಲೂಕಿನ ಪ್ರಮೋದ್ ಗೌಡ(53) ಎಂಬವರು ಓಂ ಶ್ರೀ ದತ್ತ ಎಂಬ ಮೀನುಗಾರಿಕಾ ಬೋಟ್‌ನಲ್ಲಿ ಮಲ್ಪೆ ಬಂದರಿನಿಂದ ಮೀನು ಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದರು. ಅ.3ರಂದು ನಸುಕಿನ ವೇಳೆ ಪ್ರಮೋದ್ ಗೌಡ ಆಕಸ್ಮಿಕವಾಗಿ ಕಾಲು ಜಾರಿ ಬೋಟಿನಿಂದ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor