ಉಡುಪಿ: ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ ಯಶಸ್ಸು ಖಚಿತ. ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ ಗಳು ಬರುವಂತಹ ವಾತಾವರಣ ಇಂದು ನಿರ್ಮಾಣವಾಗುತ್ತಿದೆ ಎಂದು ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ವತಿಯಿಂದ ನಿಟ್ಟೆಯ ಎನ್‌ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗದಲ್ಲಿ ಹಾಗೂ ಎಂ.ಆರ್.ಜಿ. ಗ್ರೂಪ್‌ನ ಪ್ರಾಯೋಜ ಕತ್ವದಲ್ಲಿ ಕುಂತಳ ನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ಮತ್ತು ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್ಪೋ-2026 ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇಂದಿನ ಯುವಜನರು ಅದೃಷ್ಟವಂತರು. ಉದ್ಯೋಗ ಹುಡುಕಿ ಕೊಂಡು ಹೋಗುವ ಬದಲು, ಉದ್ಯೋಗಾವಕಾಶ ಗಳೇ ಅವರ ಬಳಿಗೆ ಬರುತ್ತಿವೆ. ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಉದ್ಯೋಗಕ್ಕಾಗಿ ಬೇರೆಡೆಗೆ ತೆರಳುವ ಪರಿಸ್ಥಿತಿ ಬದಲಾಗಬೇಕು. ಜಿಲ್ಲೆಯಲ್ಲಿಯೇ ಅವರಿಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸಿ, ಇಲ್ಲಿಯೇ ನೆಲೆಸುವಂತೆ ಮಾಡುವ ಪ್ರಯತ್ನಗಳು ನಡೆಯಬೇಕು. ಯುವಜನರು ಗುರಿಯೊಂದಿಗೆ ನಿರಂತರ ಪರಿಶ್ರಮಪಟ್ಟರೆ ಯಶಸ್ಸು ಸಾಧಿಸಲು ಸಾಧ್ಯ ದರು.

ಸ್ಟಡಿ ಅಬ್ರಾಡ್ ಎಕ್ಸ್ಪೋ-2026 ಅನ್ನು ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಎನ್.ವಿಶಾಲ್ ಹೆಗ್ಡೆ ಉದ್ಘಾಟಿಸಿದರು. ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಕೌಶಲ್ಯ ಸ್ಕಿಲ್ಸ್ ಬುಲೆಟಿನ್ ಬಿಡುಗಡೆಗೊಳಿಸಿದರು.

ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಕೆ.ಜಯಪ್ರಕಾಶ್ ಹೆಗ್ಡೆ, ಪ್ರಮೋದ್ ಮಧ್ವರಾಜ್, ಎನ್‌ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಂಕರ್, ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣಪ್ರಸಾದ್, ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಉದ್ಯಮಿಗಳಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ವಿಜಯ ಹೆಗ್ಡೆ, ಕಾರ್ತಿಕ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ.ಎಚ್.ಬಿ.ಶೆಟ್ಟಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಹರೀಶ್ ಶೆಟ್ಟಿ ಐಕಳ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಟ್ರಸ್ಟ್‌ನ ಕೋಶಾಧಿಕಾರಿ ವಿಜಿತ್ ಶೆಟ್ಟಿ ಹಾಗೂ ಟ್ರಸ್ಟಿ ಪದ್ಮನಾಭ ಹೆಗ್ಡೆ ಉಪಸ್ಥಿತರಿದ್ದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor