ಬ್ರಹ್ಮಾವರ, ಅ.10: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನ ಅ.9ರಂದು ಉಪ್ಪೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಹರ್ಮನ್ ಡಿಸೋಜ ಎಂದು ಗುರುತಿಸಲಾಗಿದೆ. ಬೆಳಗ್ಗೆ 7.45ರ ಸುಮಾರಿಗೆ ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸುದೀಪ್ ಎಂಬವರ ಬೈಕ್, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಹರ್ಮನ್ ಡಿಸೋಜ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಹರ್ಮನ್ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ. ಅಲ್ಲದೇ ಬೈಕ್ ಸವಾರ ಸುದೀಪ್ ಕೂಡ ಗಾಯಗೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor