ಬೈಂದೂರು, ಅ.11: ಬೈಕೊಂದು ಹತೋಟಿ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಅವರ ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಬೈಂದೂರು ಒತ್ತಿನೆಣೆ ನರ್ಸರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.10ರಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ಭಟ್ಕಳದ ಉಮೇಶ್(42) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರೆ ಮೃತರ ಪತ್ನಿ ಪದ್ಮಾವತಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಹೋಗುತ್ತಿದ್ದ ಬೈಕ್, ಸವಾರನ ಹತೋಟಿ ತಪ್ಪಿ ರಸ್ತೆಯ ಎಡಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಬೈಕ್ ಸವಾರರಿಬ್ಬರು ರಸ್ತೆ ಬಿದ್ದಿದ್ದು, ಅದರಲ್ಲಿ ಉಮೇಶ್ ಧರಿಸಿದ್ದ ಹೆಲ್ಮೆಟ್ ಹಾರಿ ಅವರ ತಲೆಗೆ ಡಿವೈಡರ್ ಬಡಿಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಬೈಂದೂರು ಸರಕಾರಿ ಆಸ್ವತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor