ಗೃಹರಕ್ಷಕರ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ
ಉಡುಪಿ, ಅ.12: ಜಿಲ್ಲಾ ಗೃಹರಕ್ಷಕದಳ ಉಡುಪಿ ಜಿಲ್ಲೆ ಇವರ ವತಿಯಿಂದ ಗೃಹರಕ್ಷಕರ ಪಶ್ಚಿಮ ವಲಯ ವೃತ್ತಿಪರ ಕ್ರೀಡಾಕೂಟವು ಅ.14ರಿಂದ 16 ರವರೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅ.15ರಂದು ಬೆಳಗ್ಗೆ 8:30ಕ್ಕೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕ್ರೀಡಾಕೂಟ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ನಾಯ್ಕ್, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್ ಮತ್ತಿತರರು ಭಾಗವಹಿಸಲಿದ್ದಾರೆ.
ಅ.16ರಂದು ಅಪರಾಹ್ನ 3:00ಕ್ಕೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಗೌರವ ರಕ್ಷೆ ಸ್ವೀಕಾರ ಮಾಡಿ, ಸಮಾರೋಪ ಭಾಷಣ ಮಾಡಲಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಜಿಪಂ ಸಿಇಒ ಪ್ರತೀಕ್ ಬಾಯಲ್, ಬ್ರಹ್ಮಾವರ ವಂಡಾರು ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್‌ನ ಸಂಪತ್ ಶೆಟ್ಟಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಚಿಕ್ಕಮಗಳೂರು ಜಿಲ್ಲೆ ಗೃಹರಕ್ಷಕ ದಳದ ಸಮಾದೇಷ್ಟರಾದ ನಸೀಮ್ ತಾಜ್ ಮತ್ತಿತರರು ಭಾಗವಹಿಸುವರು. ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ರೋಶನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.