ಉಡುಪಿ, ಅ.12:ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ಜನತಾಕಾಲನಿ ನಿವಾಸಿ ಆರ್. ರಾಜು (68) ಎಂಬವರು ಮಾನಸಿಕ ಅಸ್ವಸ್ಥ ರಾಗಿದ್ದು, ಪತ್ನಿಯ ಮರಣ ನಂತರ ಸರಿಯಾಗಿ ಮನೆಗೆ ಬಾರದೆ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು 2-3 ತಿಂಗಳಿಗೊಮ್ಮೆ ಮನೆಗೆ ಬಂದು ಹೋಗುತ್ತಿದ್ದು, ಸುಮಾರು ಒಂದೂವರೆ ವರ್ಷದಿಂದ ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ.

5 ಅಡಿ 3ಇಂಚು ಎತ್ತರ, ಸಾಧಾರಣ ಮೈಕಟ್ಟು, ಉದ್ದ ಮುಖ ಹೊಂದಿರುವ ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿಎಸ್‌ಐ ಮೊ.ನಂ:9480805475, ಪಿ.ಐ.ಮೊ.ನಂ: 9480805448 ಹಾಗೂ ಕಂಟ್ರೋಲ್ ರೂಂ ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದು ಎಂದು ಮಣಿಪಾಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor