ಕಾಪು, ಅ.12: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಅ.11ರಂದು ಮಧ್ಯಾಹ್ನ ವೇಳೆ ಮೂಳೂರು ಫಿಶರೀಸ್ ರಸ್ತೆಯ ಬದಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಮೂಲದ ಮೂಳೂರು ಬಾಡಿಗೆಮನೆ ನಿವಾಸಿ ಮಳಿಯಪ್ಪ ಎಂಬವರ ಮಗಳು ತನುಶ್ರೀ(12) ಎಂದು ಗುರುತಿಸಲಾಗಿದೆ. ಈಕೆ ಟ್ಯೂಷನ್ ಮುಗಿಸಿ ಮನೆಗೆ ಹೋಗಲು ರಸ್ತೆ ದಾಟುತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತನುಶ್ರೀ, ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor