ಕೊಲ್ಲೂರು, ಅ.12: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ನವರಾತ್ರಿ ಉತ್ಸವಕ್ಕೆ ಅ.11ರಂದು ಚಾಲನೆ ನೀಡಲಾಗಿದ್ದು ಅ.21 ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಅ.11ರಂದು ದೇಗುಲದ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಧ್ವಜಸ್ತಂಭದ ಗಣಪತಿ ಪೂಜೆಯ ಬಳಿಕ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ ಸಹಿತ ವ್ಯವಸ್ಥಾಪನ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor