ಗಂಗೊಳ್ಳಿ, ಅ. 13: ಕರ್ನಾಟಕ ರಾಜ್ಯದ ಟಾಪ್ 10 ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ 7ನೇ ಸ್ಥಾನ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಗಂಗೊಳ್ಳಿ ಪೊಲೀಸ್ ಠಾಣೆಯ ಎಸ್ಸೈ ಪವನ್ ನಾಯಕ್ ಹಾಗೂ ಸಿಬ್ಬಂದಿ ವರ್ಗದ ವರನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು.

ಕರ್ತವ್ಯ ನಿಷ್ಠೆ, ದಕ್ಷತೆ ಹಾಗೂ ಜನಸ್ನೇಹಿ ಪೊಲೀಸ್ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಒಕ್ಕೂಟದ ಪದಾಧಿಕಾರಿಗಳು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಎಸ್.ದಸ್ತಗೀರ್ ಕಂಡ್ಲೂರು, ಕಾರ್ಯದರ್ಶಿ ರಿಯಾಝ್ ಕೋಡಿ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮುಹಮ್ಮದ್ ರಫೀಕ್ ಗಂಗೊಳ್ಳಿ, ಜಿಲ್ಲಾ ಉಪಾಧ್ಯಕ್ಷ ಶಾಬಾನ್ ಹಂಗಳೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೌಲಾನ ಝಮೀರ್ ಅಹ್ಮದ್ ರಶಾದಿ, ಜಿಲ್ಲಾ ಸಮಿತಿ ಸದಸ್ಯರಾದ ಅಬು ಮುಹಮ್ಮದ್ ಕುಂದಾಪುರ, ರೆಹಾನ್ ತ್ರಾಸಿ, ಮುನಾಫ್ ಕಂಡ್ಲೂರು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor